Headlines

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕೇಂದ್ರಗಳು ರೈತರಿಗೆ ನವೀನ ಕೃಷಿ ತಂತ್ರಜ್ಞಾನ, ಪತ್ತೆ ಮಾಡಲಾದ ಹೊಸ ಹಣ್ಣಿನ ಬೀಜಗಳು, ಮತ್ತು ಕೃಷಿ ಯಂತ್ರೋಪಕರಣಗಳ ಬಳಕೆಯ ಕುರಿತು ತರಬೇತಿ ನೀಡಲಿವೆ.
ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ

ವಿಜಯನಗರ ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದೆ’ ಎಂದು ಹೇಳಿದರು. ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಕೃಷಿ ಇಲಾಖೆಯಲ್ಲಿ ತರಬೇತಿ ಮತ್ತು ಗುಣಮಟ್ಟ ನಿಯಂತ್ರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ ಮಾನ್ಯತೆಗೆ ಒಳಪಡಿಸುವ ಯೋಜನೆಯಿದ್ದು, ಬೈಲಹೊಂಗಲದಲ್ಲಿರುವ ಪರತಂತ್ರ ಜೀವಿ ಉತ್ಪಾದನೆ ಪ್ರಯೋಗಾಲಯವನ್ನು ನವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ. ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಮತ್ತು ಸಕಾಲದಲ್ಲಿ ಸಮಸ್ಯೆಗಳಿಗೆ ಸ್ಪಂದಿಸಿ,” ಎಂದು ಸೂಚಿಸಿದರು. “ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೆ ವಿತರಣೆ ಮಾಡಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಾಯವನ್ನೂ ಪಡೆಯಿರಿ.” ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading