Headlines

Karnataka: RDPR ಇಲಾಖೆಯಲ್ಲಿ ಖಾಲಿ ಇರುವ 247 PDO ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, Apply Online Now

ಯಾವುದೇ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಹೊಂದಿರುವವರಿಗೆ ಈ ವರ್ಷ ಜಾಬ್ ಆಫರ್ ಅನ್ನು ಕರ್ನಾಟಕ ಸರ್ಕಾರ ನೀಡಿದೆ.ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿದೆ. ಒಟ್ಟು 247 ಪಿಡಿಓ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು :- ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
ಒಟ್ಟು ಹುದ್ದೆ :- 1. ಉಳಿಕೆ ಮೂಲ ವೃಂದ (Non HK) - 150 2. ಸ್ಥಳೀಯ ವೃಂದ (HK) - 97
ಮಾಸಿಕ ವೇತನ :- 37900-70850
ಶೈಕ್ಷಣಿಕ ವಿದ್ಯಾರ್ಹತೆ :- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ :- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು. ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: 1. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
2. ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
3. ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :- * ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
* ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/- * ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
* ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಯುಪಿಐ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ಅರ್ಜಿ ಹಾಕುವ ವಿಧಾನ :- ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.04.2024 ರಿಂದ 15.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ.
ಆಯ್ಕೆವಿಧಾನ :- ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 15-05-2024

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading