ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. (Lok Sabha Election 2024) ಜೂ.4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಗೆದ್ದ ಮತ್ತು ಸೋತ ಅಭ್ಯರ್ಥಿಗಳ ಅಭಿಮಾನಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.