Karnataka Jobs : ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ
ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ 'ಸಿ')
ಇಲಾಖೆ ಹೆಸರು:- ಸಾರಿಗೆ ಇಲಾಖೆ |
---|
ಹುದ್ದೆಯ ಹೆಸರು :- ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ 'ಸಿ') |
ಒಟ್ಟು ಹುದ್ದೆ :- 1. ಉಳಿಕೆ ಮೂಲ ವೃಂದ (Non HK) - 70 2. ಸ್ಥಳೀಯ ವೃಂದ (HK) - 06 |
ಮಾಸಿಕ ವೇತನ :- 33,450 - 62,600/- |
ಶೈಕ್ಷಣಿಕ ವಿದ್ಯಾರ್ಹತೆ :- * ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು. * ಮೂರು ವರ್ಷಗಳ ಡಿಪ್ಲೊಮಾ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್ ಅರ್ಹತೆ ಹೊಂದಿರಬೇಕು. ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಹೊಂದಿರಬೇಕು. * ಲಘು ಮೋಟಾರು ವಾಹನ ಮತ್ತು ಮೋಟಾರು ಸೈಕಲ್ (ಗಿಯರ್) ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು. |
ವಯೋಮಿತಿ :- * ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. * ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ - 35 ವರ್ಷ * ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 - ವರ್ಷ * ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ |
ಅರ್ಜಿ ಹಾಕುವ ವಿಧಾನ :- ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 30.05.2024 ರಿಂದ 30.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. |
ಆಯ್ಕೆವಿಧಾನ :- ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ. |
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-05-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2024 ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 30-06-2024 |