ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೊಸಪೇಟೆಯಲ್ಲಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರ ಹುದ್ದೆಯನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸುವುದಾಗಿ ಘೋಷಿಸಿದರು. ವಾಲ್ಮೀಕಿ ನಿಗಮದಲ್ಲಿ ಬಯಲಾಗಿರುವ ಹಗರಣದ ಹಿನ್ನೆಲೆ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಜೂನ್ 6ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರಿಂದ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ತೆರವಾಗಿತ್ತು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಸರಕಾರವು ಜಮೀರ್ ಅಹ್ಮದ್ ಖಾನ್ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಿ, ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.