Headlines

CM Siddaramaiah: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

ಬೆಂಗಳೂರು: ತಮಗೆ ತಾವು ಮಹಾರಾಜರು ಎಂಬ ಭಾವನೆ ಇದ್ದರೆ, ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ (CM Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವೃತ್ತನಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

“ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನಸೇವಕರು. ಈ ಸತ್ಯವನ್ನು ಮನಗಾಣಿಸಿ, ಜನಸೇವೆ ಮಾಡಬೇಕು. ಕರ್ತವ್ಯ ಲೋಪಕ್ಕೆ ಹೆಚ್ಚುವರಿಯಾಗಿ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು,” ಎಂದು ಅವರು ತಿಳಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ

“ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ಜಿಲ್ಲೆ ಮಾಹಿತಿಯನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹ, ಕ್ರಿಯಾಶೀಲತೆ ಮತ್ತು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು, ಜಿಲ್ಲೆಯ ಅಭಿವೃದ್ಧಿಯಾಗಲು ಸಾಧ್ಯ,” ಎಂದು ಹೇಳಿದರು.

“ಜಿಲ್ಲಾಧಿಕಾರಿಗಳು ಗಜೆಟಿಯರ್, ಎಕನಾಮಿಕ್ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಜಿಲ್ಲೆಯ ಆರ್ಥಿಕ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು,” ಎಂದು ಅವರು ಸಲಹೆ ನೀಡಿದರು.

“ಈ ಸಭೆಯ ಉದ್ದೇಶ ಅಧಿಕಾರಿಗಳನ್ನು ಟೀಕೆ ಮಾಡಲು ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಎಷ್ಟರ ಮಟ್ಟಿಗೆ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲು ಕರೆಸಿದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಇಒ, ಎಸ್ಪಿ ಅಧಿಕಾರಿಗಳ ಪಾತ್ರ ದೊಡ್ಡದು. ಈ ಮೂವರು ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಅಭಿವೃದ್ಧಿ ವೇಗ ಪಡೆಯಲು ಸಾಧ್ಯ,” ಎಂದು ಹೇಳಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

“ನಾನು ಮಂತ್ರಿಯಾಗಿ 40 ವರ್ಷಗಳಾದವು. 40ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ,” ಎಂದರು.

“ಫ್ರೇಸರ್ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಗಾಯಕ್‍ವಾಡ್, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರು ಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ,” ಎಂದು ಅವರು ಉದಾಹರಿಸಿದರು.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading