Headlines

Karnataka: ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ, ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka : ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮವಾಗಿ ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ. ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಿ, ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ

ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ಗಮನಿಸಿದಂತೆ, ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಹ ಭೂಕುಸಿತದ ಪ್ರಕರಣಗಳು ವರದಿಯಾಗಿವೆ. ಇದರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಭಾಗಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು.

ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸಲು, ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಮತ್ತು ಪ್ರವಾಹ ಪೀಡಿತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ದಿನದ 24 ಗಂಟೆಗಳೂ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯವಿದ್ದು ಎಚ್ಚರ ವಹಿಸಬೇಕು.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading