ನವದೆಹಲಿ: ಮುಂಬೈ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದು, ಬಾಲಿವುಡ್ ನಟ ಶಾರುಖ್ ಖಾನ್ಗೆ (Shah Rukh Khan) ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಲಾಗಿದೆ.
ಮೊಹಮ್ಮದ್ ಫೈಝಾನ್ ಖಾನ್ ಎಂಬ ಆರೋಪಿ ಛತ್ತೀಸ್ಗಢದ ರಾಯ್ಪುರದಲ್ಲಿರುವ ತನ್ನ ನಿವಾಸದಿಂದ ಬಂಧಿಸಲ್ಪಟ್ಟಿದ್ದಾನೆ. ಈತ ವಕೀಲ ವೃತ್ತಿ ನಡೆಸುತ್ತಿದ್ದನೆಂದು ತಿಳಿದುಬಂದಿದೆ.
ಬಾಂದ್ರಾ ಪೊಲೀಸರಿಗೆ ಕರೆ ಮಾಡಿ, ಶಾರುಖ್ ಖಾನ್ ಅವರು 50 ಲಕ್ಷ ರೂ. ಪಾವತಿಸದಿದ್ದರೆ ಅವರ ಜೀವಕ್ಕೆ ಅಪಾಯವಿದೆ ಎಂದು ಬೆದರಿಕೆ ಹಾಕಲಾಗಿತ್ತು. ಈ ಹಿಂದೆ ನಟ ಸಲ್ಮಾನ್ ಖಾನ್ಗೂ ಸರಣಿ ಬೆದರಿಕೆಗಳು ಬಂದಿದ್ದವು, ಇದರ ಬೆನ್ನಲ್ಲೇ ಶಾರುಖ್ ಖಾನ್ಗೆ ಈ ರೀತಿಯ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿದ್ದಾರೆ.