ನವದೆಹಲಿ: ನಟ ಹಾಗೂ ತೃಣಮೂಲ ಕಾಂಗ್ರೆಸ್‌ನ (TMC) ಸಂಸದ ಶತ್ರುಘ್ನ ಸಿನ್ಹಾ ಅವರು ಇಂದು ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಜೂನ್‌ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಕಾರಣಗಳಿಂದಾಗಿ ಅವರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರಿಂದ ಅವರು ಅಧಿಕೃತವಾಗಿ ಲೋಕಸಭಾ ಸದಸ್ಯರಾಗಿ ತಮ್ಮ ಕರ್ತವ್ಯಗಳನ್ನು ಪ್ರಾರಂಭಿಸಿದರು.
