ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕದಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನೀವು ಅರ್ಹತೆ ಮತ್ತು ಆಸಕ್ತಿ ಹೊಂದಿದ್ದರೆ, ಆನ್ಲೈನ್ ಅರ್ಜಿಯನ್ನು ಸಲ್ಲಿಸಿ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಕಂದಾಯ ಇಲಾಖೆ ಉದ್ಯೋಗಗಳು 2024 ಅನ್ನು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬಿಡುಗಡೆ ಮಾಡಿದೆ. ನೇಮಕಾತಿಯ ಪ್ರಕಾರ ಒಟ್ಟು 1000 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ..
ಗ್ರಾಮ ಆಡಳಿತಾಧಿಕಾರಿ
| ಹುದ್ದೆಯ ಹೆಸರು :- ಗ್ರಾಮ ಆಡಳಿತ ಅಧಿಕಾರಿ |
|---|
| ಒಟ್ಟು ಹುದ್ದೆ :- 1000 ಹುದ್ದೆಗಳ ನೇಮಕಾತಿ |
| ಮಾಸಿಕ ವೇತನ :- 21,400 - 42,000 |
| ಶೈಕ್ಷಣಿಕ ವಿದ್ಯಾರ್ಹತೆ :- ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ * ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ) (ಅಭ್ಯರ್ಥಿಗಳು ಎನ್ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.) |
| ವಯೋಮಿತಿ :- ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ0ದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು * ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ - 35 ವರ್ಷಗಳು * ಪ್ರವರ್ಗ ೨ಎ, ೨ಬಿ, ೩ಎ, ೩ಬಿ ಅಭ್ಯರ್ಥಿಗಳಿಗೆ - 38 ವರ್ಷಗಳು * ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-೧ ಅಭ್ಯರ್ಥಿಗಳಿಗೆ - 40 ವರ್ಷಗಳು |
| ಅರ್ಜಿ ಶುಲ್ಕ :- ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-೨ಎ / ೨ಬಿ / ೩ಎ / ೩ಬಿ) - ರೂ. 750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು - ರೂ. 500/- |
| ಅರ್ಜಿ ಸಲ್ಲಿಸುವ ವಿಧಾನ :- ಪ್ರಾಧಿಕಾರದ ವೆಬ್ಸೈಟ್ ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. * ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ - 05-04-2024 ರ ಬೆಳಿಗ್ಗೆ 11.00 ರಿಂದ * ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 04-05-2024 ರ ರಾತ್ರಿ 11.59 ರ ವರೆಗೆ * ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ - 07-05-2024 |


