ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ನೇಮಕ, ದಿನಾಂಕ ನಿಗದಿ ಬಗ್ಗೆ ಚರ್ಚೆ ನಡೆಯಿತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಹಾಗು ಶಾಸಕರು ಉಪಸ್ಥಿತರಿದ್ದರು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ವಿಶ್ವಾಸ ನನಗಿದೆ ಎಂದು ತಿಳಿಸಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ರಾಜ್ಯ, ಹೊರರಾಜ್ಯ ಮತ್ತು ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.