ಭಾರಿ ಮಳೆಯ ಹಿನ್ನೆಲೆಯಲ್ಲಿ ‘ರಾಜೂಸ್ ಐಎಎಸ್ ಸ್ಟಡಿ ಸರ್ಕಲ್’ನ ನೆಲಮಾಳಿಗೆಯು ಸಂಪೂರ್ಣ ನೀರಿನಿಂದ ಆವೃತ್ತವಾಗಿದ್ದಕ್ಕಾಗಿ ಅಗ್ನಿಶಾಮಕ ಇಲಾಖೆಗೆ ರಾತ್ರಿ 7 ಗಂಟೆ ಸುಮಾರಿಗೆ ಕರೆ ಬಂದಿತು. 5 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು, ಆದರೆ ಮಳೆಯ ನೀರು ತುಂಬಿಕೊಂಡಿದ್ದರಿಂದ ಜನರು ಹೊರಬರಲಾಗದೆ ಸಿಲುಕಿಕೊಂಡಿದ್ದರು. ಎಂದು ಕೇಂದ್ರ ದೆಹಲಿಯ ಡಿಸಿಪಿ ಎಂ. ಹರ್ಷವರ್ಧನ್ ವರದಿಗಾರರಿಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಮತ್ತು ಪೊಲೀಸರು ಸೇರಿ ಕಾರ್ಯಾಚರಣೆ ನಡೆಸಿ, ಇಬ್ಬರು ಮಹಿಳಾ ಅಭ್ಯರ್ಥಿಗಳು ಮತ್ತು ಒಬ್ಬ ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿದರು. ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.