ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕೆಲ ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.
ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ
71 ವರ್ಷ ವಯಸ್ಸಿನ ಗಾಯಕ್ವಾಡ್ ಅವರು ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಭಾರತ ತಂಡದ ಕೋಚ್ ಮತ್ತು ರಾಷ್ಟ್ರೀಯ ಆಯ್ಕೆಗಾರರೂ ಆಗಿದ್ದರು. ಗಾಯಕ್ವಾಡ್ ಅವರು ಕಳೆದ ತಿಂಗಳು ಲಂಡನ್ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಬಿಸಿಸಿಐ ಅವರ ಚಿಕಿತ್ಸೆಗಾಗಿ ಒಂದು ಕೋಟಿ ರೂಪಾಯಿ ಧನಸಹಾಯ ಮಾಡಿತ್ತು. 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರೂ ಕೂಡ ಆರ್ಥಿಕ ಸಹಾಯ ನೀಡಿದ್ದರು.
ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಬಾರೋಡಾ ಕ್ರಿಕೆಟ್ ಅಸೋಸಿಯೇಷನ್ನ ಮುಖ್ಯಸ್ಥರಾಗಿದ್ದರು ಮತ್ತು ಅನಾರೋಗ್ಯಕ್ಕೆ ತುತ್ತಾಗುವ ಮೊದಲು ಭಾರತೀಯ ಕ್ರಿಕೆಟ್ ಅಸೋಸಿಯೇಶನ್ನ ಪ್ರತಿನಿಧಿಯಾಗಿ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸದಸ್ಯರಾಗಿದ್ದರು.
ಅಂಶುಮಾನ್ ಗಾಯಕ್ವಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಗಾಯಕ್ವಾಡ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 1974 ಮತ್ತು 1984 ರ ನಡುವೆ ಅವರು ಸುನಿಲ್ ಗವಾಸ್ಕರ್ ಅವರ ಜೊತೆಗೆ ಎರಡನೇ ಓಪನರ್ ಆಗಿ ಭಾರತೀಯ ತಂಡದಲ್ಲಿ ಸೇವೆ ಸಲ್ಲಿಸಿದ್ದರು.