Headlines

ತೆಲಂಗಾಣದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ, ಸಿಎಂ ರೇವಂತ್ ರೆಡ್ಡಿ ತುರ್ತು ಸಭೆ

ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವೆಡೆ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ.

ಸಿಎಂ ಎ. ರೇವಂತ್ ರೆಡ್ಡಿ ಅವರು ಮಳೆ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಗಮನಿಸಿ, ತಮ್ಮ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಅವರು ಮಂತ್ರಿಗಳಾದ ಭಟ್ಟಿ ವಿಕ್ರಮಾರ್ಕ, ಎನ್. ಉತ್ತಮ್ ಕುಮಾರ್ ರೆಡ್ಡಿ, ತುಮ್ಮಲ ನಾಗೇಶ್ವರ ರಾವ್, ದಾಮೋದರ ರಾಜ ನರಸಿಂಹ, ಮತ್ತು ಜೂಪಲ್ಲಿ ಕೃಷ್ಣರಾವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚರ್ಚಿಸಿದ್ದಾರೆ.
ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಮಹಬೂಬಾಬಾದ್, ನಿಜಾಮಾಬಾದ್, ಕಾಮರೆಡ್ಡಿ, ಮಹಬೂಬ್‌ನಗರ, ನಾಗರಕರ್ನೂಲ್, ವನಪರ್ತಿ, ನಾರಾಯಣಪೇಟೆ, ಜೋಗುಲಾಂಬ ಗದ್ವಾಲ್ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಹೈದರಾಬಾದ್ ನಗರದಾದ್ಯಂತ ವ್ಯಾಪಕ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. 

ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ತಂಡಗಳು ಹೆಲಿಕಾಪ್ಟರ್ ಮೂಲಕ 28 ಜನರನ್ನು ರಕ್ಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading