India Post Jobs :ಕರ್ನಾಟಕ ಅಂಚೆ ಇಲಾಖೆಯಲ್ಲಿ (India Post Recruitment 2025) ನಲ್ಲಿ ಖಾಲಿ ಇರುವ 21413 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
India Post Recruitment 2025
ಇಲಾಖೆ ಹೆಸರು:- ಕರ್ನಾಟಕ ಭಾರತೀಯ ಅಂಚೆ ಇಲಾಖೆ |
---|
ಹುದ್ದೆಯ ಹೆಸರು :- ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್) |
ಒಟ್ಟು ಹುದ್ದೆ :- 21413 (ಕರ್ನಾಟಕ ಅಂಚೆ ವೃತ್ತದಲ್ಲಿ 1135 ಹುದ್ದೆಗಳು) |
ವೇತನಶ್ರೇಣಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000/- – 29,380/- ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ಡಾಕ್ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 – ರೂ.24,470/- |
ವಿದ್ಯಾರ್ಹತೆ :- ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು. |
ವಯೋಮಿತಿ :- ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ |
ಅರ್ಜಿ ಹಾಕುವ ವಿಧಾನ :- ಆನ್ಲೈನ್ (Online) Link indiapostgdsonline.gov.in |
ಅರ್ಜಿ ಶುಲ್ಕ:- ಪ.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು ರೂ. 100 (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.) |
ಆಯ್ಕೆವಿಧಾನ :- 10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. |
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10 ಫೆಬ್ರುವರಿ 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಮಾರ್ಚ್ 2025 |
I want this job
I want this job because my dream it to take government job