Headlines

ಕರ್ನಾಟಕ ಸಾಹಿತ್ಯ ಅಕಾಡೆಮಿ: ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ರಲ್ಲಿ ಪ್ರಕಟವಾದ ಕೃತಿಗಳಿಗೆ ಪುಸ್ತಕ ಬಹುಮಾನಕ್ಕಾಗಿ ಆಹ್ವಾನ ನೀಡಿದೆ. ಇವು ಕಾವ್ಯ, ಕಾದಂಬರಿ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಮತ್ತು ಸಂಕೀರ್ಣ ಸೇರಿದಂತೆ 23 ಪ್ರಕಾರಗಳಲ್ಲಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಈ ಪ್ರತಿಯೊಂದು ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡಿದ ಕೃತಿಗೆ ಪ್ರಶಸ್ತಿ ನೀಡಲಾಗುತ್ತದೆ. ಕೃತಿಗಳು 2023ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಜನಪದ ಪ್ರಕಾರ ಹಾಗೂ ಪಿಎಚ್.ಡಿ ಸಂಶೋಧನಾ ಗ್ರಂಥಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುವುದಿಲ್ಲ.

ಆಸಕ್ತರು ತಮ್ಮ ಕೃತಿಗಳ ನಾಲ್ಕು ಪ್ರತಿಗಳನ್ನು ಆಗಸ್ಟ್ 31ರೊಳಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-2 ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಅವರ

ವೆಬ್‌ಸೈಟ್: sahithyaacademy.karnataka.gov.in

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading