Headlines

Paris Olympics : ಒಲಿಂಪಿಕ್ಸ್ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ!

ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್, ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ ಅನರ್ಹಗೊಂಡಿದ್ದಾರೆ.
ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ

ಭಾರತೀಯ ತಂಡವು ವಿಷಾದದಿಂದ ಈ ಸುದ್ದಿಯನ್ನು ಹಂಚಿಕೊಂಡಿದ್ದು, ರಾತ್ರಿಯಿಡೀ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ಅಧಿಕ ತೂಕ ಹೊಂದಿದ್ದರಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್, ಅವರ ಖಾಸಗಿತನವನ್ನು ಗೌರವಿಸಿ, ಈ ಸಂದರ್ಭದಲ್ಲಿ ಅವರ ಜೊತೆ ನಿಲ್ಲುವುದಾಗಿ ತಿಳಿಸಿದೆ.

ವಿನೇಶ್ ಫೋಗಟ್ ಇಂದು ಡಿಹೈಡ್ರೇಷನ್‌ನಿಂದಾಗಿ ವಾಂತಿ ಮಾಡಲಾರಂಭಿಸಿದ್ದು, ಅವರನ್ನು ಒಲಿಂಪಿಕ್ಸ್ ಗೇಮ್ಸ್ ವಿಲೇಜ್‌ ವೈದ್ಯಕೀಯ ಕೇಂದ್ರಕ್ಕೆ ರವಾನಿಸಲಾಗಿದೆ. ಐಒಎ ಅಧಿಕಾರಿಗಳು ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರೂ ಅವರ ಜೊತೆಗಿದ್ದಾರೆ. ಕೋಚ್ ವೀರೇಂದ್ರ ದಹಿಯಾ, ಫೋಗಟ್ ಆರೋಗ್ಯವಾಗಿದ್ದಾರೆ ಮತ್ತು ಪ್ರಸ್ತುತ ವೈದ್ಯಕೀಯ ಕೇಂದ್ರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆಂದು ತಿಳಿಸಿದ್ದಾರೆ. ಫೈನಲ್ ಪಂದ್ಯ ಆಡುವ ಅವಕಾಶ ಕಳೆದುಕೊಂಡಿರುವುದರಿಂದ, ಅವರ ಅನರ್ಹತೆಯನ್ನು ಪ್ರಶ್ನಿಸಿ ದೂರು ನೀಡಲು ಭಾರತ ಒಲಿಂಪಿಕ್ಸ್ ಅಸೋಸಿಯೇಷನ್ ನಿರ್ಧರಿಸಿದೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading