ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. (Lok Sabha Election 2024) ಜೂ.4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಗೆದ್ದ ಮತ್ತು ಸೋತ ಅಭ್ಯರ್ಥಿಗಳ ಅಭಿಮಾನಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.