ಮೃತ ಮಕ್ಕಳು ಲೊಯಲ್ ಶಾಲೆಯ ಸಮರ್ಥ ಅಮರೇಶ (7) ಮತ್ತು ಶ್ರೀಕಾಂತ ಮಾರೇಶ (12) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಒಬ್ಬ ಬಾಲಕ ಮತ್ತು ಚಾಲಕನ ಸ್ಥಿತಿ ಗಂಭೀರವಾಗಿದೆ. ಬಲವಾದ ಅಪಘಾತದಿಂದ ಮೂರು ಮಕ್ಕಳ ಕಾಲುಗಳು ತುಂಡಾಗಿರುವ ದುರ್ಘಟನೆ ಸಂಭವಿಸಿದೆ.
ಶಾಲಾ ವಾಹನವು ಮಕ್ಕಳನ್ನು ಲೊಯಲ್ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ, ಮಾನ್ವಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಮಕ್ಕಳನ್ನು ತಕ್ಷಣವೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ನಿತಿಶ್ ಕೆ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿ, ಮೃತ ಮಕ್ಕಳ ಕುಟುಂಬಗಳಿಗೆ ಸಾಂತ್ವನ ಹೇಳಿ, ಅವರ ಪಾಲಕರಿಗೆ ತಲಾ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.