Sowmya Reddy: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ಅವರನ್ನು ನೇಮಿಸಲಾಗಿದೆ. ಈ ಕುರಿತು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಇತರ ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಚುಕು ನಾಚಿ ಅವರನ್ನು ಮತ್ತು ಚಂಡೀಗಡದಲ್ಲಿ ನಂದಿತಾ ಹೂಡ ಅವರನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *