Surat incident : ಸೂರತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ: ಕನಿಷ್ಠ 7 ಮಂದಿ ಸಾವು

ಸೂರತ್‌: ಗುಜರಾತ್‌ನ ಸೂರತ್‌ ನಗರದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೇರಿದೆ. ರಕ್ಷಣಾ ತಂಡಗಳು ಇನ್ನೂ ಬಚಾವ್ ಕಾರ್ಯದಲ್ಲಿ ತೊಡಗಿವೆ. ದುರಂತದ ನಂತರ ಕೂಡಲಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹಲವರನ್ನು ಜೀವಂತವಾಗಿ ರಕ್ಷಿಸಿದ್ದಾರೆ.

ಇದನ್ನೂ ಓದಿ: NEET Exam : ನೀಟ್ ಪರೀಕ್ಷೆ ಅಗತ್ಯವಿಲ್ಲ, ನಟ ವಿಜಯ್ ಪ್ರಧಾನಿ ಮೋದಿಗೆ ಮನವಿ

ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ನಡೆದ ದುರಂತದಲ್ಲಿ 6 ಅಂತಸ್ತಿನ ಅಪಾರ್ಟ್‌ಮೆಂಟ್‌ ( Surat incident ) ಶನಿವಾರ ತಡರಾತ್ರಿ ಕುಸಿದಿದೆ. ಈ ದುರ್ಘಟನೆ ವೇಳೆ ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಅನೇಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.
ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದು, ಈವರೆಗೆ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6-7 ಮಂದಿ ಸಿಲುಕಿರುವ ಸಾಧ್ಯತೆ ಇದೆ. 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *