ಸೂರತ್: ಗುಜರಾತ್‌ನ ಸೂರತ್ ನಗರದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೇರಿದೆ. ರಕ್ಷಣಾ ತಂಡಗಳು ಇನ್ನೂ ಬಚಾವ್ ಕಾರ್ಯದಲ್ಲಿ ತೊಡಗಿವೆ. ದುರಂತದ ನಂತರ ಕೂಡಲಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹಲವರನ್ನು ಜೀವಂತವಾಗಿ ರಕ್ಷಿಸಿದ್ದಾರೆ.
ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ನಡೆದ ದುರಂತದಲ್ಲಿ 6 ಅಂತಸ್ತಿನ ಅಪಾರ್ಟ್‌ಮೆಂಟ್ ( Surat incident ) ಶನಿವಾರ ತಡರಾತ್ರಿ ಕುಸಿದಿದೆ. ಈ ದುರ್ಘಟನೆ ವೇಳೆ ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಅನೇಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದು, ಈವರೆಗೆ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6-7 ಮಂದಿ ಸಿಲುಕಿರುವ ಸಾಧ್ಯತೆ ಇದೆ. 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.