Headlines

ಉತ್ತರ ಪ್ರದೇಶ: ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ಹಳಿ ತಪ್ಪಿದ ಘಟನೆ: ನಾಲ್ವರು ಸಾವು

ಗೊಂಡಾ: ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲು ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿದ ಪರಿಣಾಮ 4 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸ್ಥಳದಲ್ಲಿ 40 ವೈದ್ಯಕೀಯ ಸಿಬ್ಬಂದಿ ಮತ್ತು 15 ಆಂಬುಲೆನ್ಸ್‌ಗಳು ಸಜ್ಜಾಗಿವೆ. ಇನ್ನಷ್ಟು ವೈದ್ಯಕೀಯ ತಂಡಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸುತ್ತಿವೆ ಎಂದು ಉತ್ತರ ಪ್ರದೇಶ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಸ್ಥಳದಲ್ಲಿ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ್ದು, ಪ್ರಯಾಣಿಕರು ಬೋಗಿಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ರೈಲ್ವೇ ಅಧಿಕಾರಿಗಳ ಮಾಹಿತಿ ಪ್ರಕಾರ, 15904 ಸಂಖ್ಯೆಯ ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು ಇಂದು ಮಧ್ಯಾಹ್ನ 2.35ಕ್ಕೆ ಮೋತಿಗಂಜ್‌ ಮತ್ತು ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ ಹಳಿತಪ್ಪಿದೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading