ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಭೇಟಿ ನೀಡಿ, ವಿನಾಶದ ವ್ಯಾಪ್ತಿಯನ್ನು ವೀಕ್ಷಿಸಿದರು.
ಅವರು ಈ ಘಟನೆಗೆ ರಾಷ್ಟ್ರೀಯ ವಿಪತ್ತು ಎಂದು ಕರೆದಿದ್ದು, ತುರ್ತು ಸಮಗ್ರ ಕ್ರಿಯಾ ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಜುಲೈ 30ರಂದು ಮುಂಡಕ್ಕೈ, ಚೂರಲ್‌ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 300ಕ್ಕಿಂತ ಹೆಚ್ಚು ಜನರು ಮೃತರಾಗಿದ್ದು, 350ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಭಾರಿ ಯಂತ್ರಗಳ ಮೂಲಕ ರಕ್ಷಣಾ ತಂಡಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಕಲ್ಲುಬಂಡೆಗಳಡಿ ಸಿಲುಕಿರುವವರನ್ನು ಹೊರತೆಗೆದಿದ್ದಾರೆ.