Headlines

wayanad landslide : ವಯನಾಡು ಭೂಕುಸಿತ ಮೋದಿಯವರ ಭೇಟಿ: ‘ರಾಷ್ಟ್ರೀಯ ವಿಪತ್ತು’ ಘೋಷಿಸುವ ವಿಶ್ವಾಸ ರಾಹುಲ್ ಗಾಂಧಿ

ನವದೆಹಲಿ: ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದ (wayanad landslide) ಕುರಿತು ಪ್ರಧಾನಿ ನರೇಂದ್ರ ಮೋದಿ   ಅವರ, ಭೇಟಿಯ ಬಗ್ಗೆ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ “ಮೋದಿಜಿಯವರು ವೈಯಕ್ತಿಕವಾಗಿ ಈ ವಿಪತ್ತು ನೇರವಾಗಿ ಅವಲೋಕಿಸಿದ ನಂತರ, ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ,” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದು, ವಯನಾಡಿನ ಭೂಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ವಿಪತ್ತಿನಲ್ಲಿ 266ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಮೋದಿ ಅವರು, ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕೆಲಸಗಳ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading